ಡಿಕೆಶಿ ಒಡೆತನದ ಸ್ಕೂಲ್’ಗೆ ಬಾಂಬ್ ಬೆದರಿಕೆ!: ಶಾಲೆಗೆ ರಜೆ ಘೋಷಣೆ

Prasthutha|

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ನಗರ ಹಾಗೂ ಹೊರವಲಯದ ಆರೇಳು ಶಾಲೆಗಳಿಗೆ ಬಾಂಬ್ ಕರೆ ಮಾಡಿ ಆತಂಕಕ್ಕೆ ಎಡೆ ಮಾಡಿಕೊಟ್ಟ ಬೆನ್ನಲ್ಲೇ ಮತ್ತೆ ನಗರದ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ.

- Advertisement -


ರಾಜರಾಜೇಶ್ವರಿನಗರದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್​ಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು ಆತಂಕಕ್ಕೆ ಕಾರಣವಾಗಿದೆ.


ದುಷ್ಕರ್ಮಿಗಳು ನಿನ್ನೆ ರಾತ್ರಿಯೇ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್​ಗೆ ಬಾಂಬ್ ಬಾಂಬ್​ ಇಡುವುದಾಗಿ ಇ-ಮೇಲ್​ ಮುಖಾಂತರ ಬೆದರಿಕೆ ಹಾಕಿದ್ದಾರೆ.ಇ-ಮೇಲ್​ ನಲ್ಲಿ ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಗಮನಿಸಿದ ಆಡಳಿತ ಮಂಡಳಿಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಿಸಿದ್ದಾರೆ.

- Advertisement -


ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಧಾವಿಸಿ ಪರಿಶೀಲನೆ ನಡೆಸಿದ್ದು ಅದೊಂದು ಹುಸಿ ಕರೆ ಎನ್ನುವುದು ಪತ್ತೆಯಾಗಿದೆ. ಶಾಲೆಗೆ ರಾಜರಾಜೇಶ್ವರಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಶಾಲೆಗೆ ಆಗಮಿಸಿದ ಡಿಕೆಶಿ ಪುತ್ರಿ ಐಶ್ವರ್ಯಾ ಶಿವಕುಮಾರ್, ಸಿಬ್ಬಂದಿ ಮತ್ತು ಪೊಲೀಸರ ಬಳಿ ಮಾಹಿತಿ ಪಡೆಯುತ್ತಿದ್ದಾರೆ.

ಮಹದೇವಪುರದ ಗೋಪಾಲನ್ ಇಂಟರ್ನ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಬಿನೈಸರ್ ಸ್ಕೂಲ್‌ಗೆ ಅನಾಮಿಕ ಹೆಸರಿನಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿತ್ತು.



Join Whatsapp