ಧಾರ್ (ಮಧ್ಯಪ್ರದೇಶ): ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಸೇತುವೆಯಿಂದ ಉರುಳಿಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಖಾಲ್ಘಾಟ್ ಸಂಜಯ್ ಸೇತು ಎಂಬಲ್ಲಿ ನಡೆದಿದೆ.
ಇಂದೋರ್ ನಿಂದ ಪುಣೆಗೆ ಸಾಗುತ್ತಿದ್ದ 55 ಜನರಿದ್ದ ಬಸ್ ತನ್ನ ಸಮತೋಲನವನ್ನು ಕಳೆದುಕೊಂಡು ಸೇತುವೆಯಿಂದ ಕೆಳಗೆ ಬಿದ್ದಿದ್ದು, 12 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಜನರನ್ನು ರಕ್ಷಿಸಲಾಗಿದೆ ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.