ಪುತ್ತೂರು: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಮುಬಿನ್ (20) ಬಂಧಿತ. ನಗರದ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಈತನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳಲಾಗಿದೆ.
ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಕಳೆದ ಕೆಲ ಸಮಯಗಳಿಂದ ಗಾಂಜಾ ಪೂರೈಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್.ಐ ರಾಜೇಶ್ ಕೆ.ವಿ ಮತ್ತು ತಂಡ ಕಾರ್ಯಾಚರಣೆ ನಡೆಸಿದ್ದು, ಬಂಧಿತನಿಂದ ಸುಮಾರು ಅರ್ಧ ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.