ಬೆಂಗಳೂರು: ಸಿ.ಎಂ. ಇಬ್ರಾಹೀಂ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಗಸ್ಟ್ 11ರಂದು ಮತದಾನ ನಡೆಯಲಿದೆ.
ಸಿ.ಎಂ.ಇಬ್ರಾಹೀಂ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದಾಗ ವಿಧಾನ ಪರಿಷತ್ ಸ್ಥಾನಕ್ಕೂ ಮಾರ್ಚ್ 31ರಂದು ರಾಜೀನಾಮೆ ನೀಡಿದ್ದರು. ಅವರ ಅಧಿಕಾರಾವಧಿ 2024, ಜೂನ್ 17ರವರೆಗೆ ಇತ್ತು. ಆದ್ದರಿಂದ ಈ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಜು.25ರಂದು ಅಧಿಸೂಚನೆ ಹೊರಬೀಳಲಿದ್ದು, ಆಗಸ್ಟ್ 1 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.ಆಗಸ್ಟ್ 2ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಆಗಸ್ಟ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.ಆಗಸ್ಟ್ 11ರಂದು ಮತದಾನ ನಡೆಯಲಿದೆ. ಅದೇ ದಿನ ಸಂಚೆ 5 ಗಂಟೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ.