ಲಂಡನ್: ಇಂಗ್ಲೆಂಡ್ ನ ಟೆಸ್ಟ್ ತಂಡವನ್ನು ಮುನ್ನಡೆಸಲು ಮತ್ತು ಟಿ 20 ಕ್ರಿಕೆಟ್ ಆಡುವತ್ತ ಗಮನ ಹರಿಸಲು ಬೇಕಾಗಿ ಏಕದಿನ ಕ್ರಿಕೆಟ್ ನಿಂದ ಬೆನ್ ಸ್ಟೋಕ್ಸ್ ನಿವೃತ್ತಿ ಹೊಂದುವುದಾಗಿ ಬೆನ್ ಸ್ಟೋಕ್ಸ್ ಘೋಷಿಸಿದ್ದಾರೆ. ಅವರು ಮಂಗಳವಾರ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಕೊನೆಯ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ.
ಸ್ಟೋಕ್ಸ್ 2019 ರ ಕ್ರಿಕೆಟ್ ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಅದ್ಭುತ ಗೆಲುವಿನತ್ತ ಮುನ್ನಡೆಸಿದ್ದರು.
ಈ ಕುರಿತು ಹೇಳಿಕೆ ನೀಡಿರುವ ಸ್ಟೋಕ್ಸ್,ನಾನು ಮಂಗಳವಾರ ಡರ್ಹಾಮ್ನಲ್ಲಿ ಏಕದಿನ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಪರ ನನ್ನ ಕೊನೆಯ ಪಂದ್ಯವನ್ನು ಆಡಲಿದ್ದೇನೆ. ಬಳಿಕ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಬೆನ್ ಸ್ಟೋಕ್ಸ್ ಸೋಮವಾರ ಮಧ್ಯಾಹ್ನ ಸಾಮಾಜಿಕ ಮಾಧ್ಯಮದಲ್ಲಿ ಈ ಸುದ್ದಿಯನ್ನು ಘೋಷಿಸಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಮಂಗಳವಾರದ ಏಕದಿನ ಪಂದ್ಯದ ನಂತರ ಅವರು ಏಕದಿನ ಕ್ರಮದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.