SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೇ.39.59 ವಿದ್ಯಾರ್ಥಿಗಳು ಉತ್ತೀರ್ಣ

Prasthutha|

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

- Advertisement -


ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.

ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್ ಸೈಟ್ ನಲ್ಲಿ ( https://karresults.nic.in/ ) ಫಲಿತಾಂಶ ವೀಕ್ಷಿಸಬಹುದು.
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ ಎಂ ಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.



Join Whatsapp