ಮಂಗಳೂರು: ಸುಳ್ಯ ತಾಲೂಕಿನ ಕಳಂಜದಲ್ಲಿ ಮೊನ್ನೆ ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮಸೂದ್ ಎಂಬ ಯುವಕ ಮೃತರಾಗಿದ್ದು,ಘಟನೆಯ ಬಗ್ಗೆ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ನೈಜ ಅಪರಾಧಿಗಳನ್ನು ಆದಷ್ಟು ಬೇಗನೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸರಕಾರ ಮೃತ ಮಸೂದ್’ರವರ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಬೇಕೆಂದು ಗೃಹ ಸಚಿವರು ಹಾಗೂ ಮುಖ್ಯಮಂತ್ರಿಯನ್ನು ಶಾಸಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.