ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅತಿ ಹೆಚ್ಚು ಮತಗಳನ್ನು ಪಡೆದು ಜಯಗಳಿಸುವ ಮೂಲಕ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಸೋಲನುಭವಿಸಿದ್ದಾರೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿದ್ದು, ಶೇಕಡಾ 99.18ರಷ್ಟು ಮತ ಚಲಾವಣೆಯಾಗಿತ್ತು.
ರಾಮನಾಥ್ ಕೋವಿಂದ್ ಅವರ ಉತ್ತರಾಧಿಕಾರಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ.