ಮಸೂದ್ ಹತ್ಯೆಗೆ SSF ರಾಜ್ಯ ಸಮಿತಿ ಖಂಡನೆ

Prasthutha|

ಮಂಗಳೂರು: ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಉಂಟಾದ ಜಗಳವನ್ನು ಸರಿಪಡಿಸುವ ನೆಪದಲ್ಲಿ ಸುಳ್ಯದ ಮಸೂದ್ ಎಂಬ ಯುವಕನನ್ನು ಕರೆಯಿಸಿ ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿರುವುದನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಕಟುಶಬ್ದಗಳಿಂದ ಖಂಡಿಸಿದೆ.

- Advertisement -

ಈ ನಿಟ್ಟಿನಲ್ಲಿ ಹಂತಕರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಕೋಮುದ್ವೇಷದಿಂದ ನಡೆದಿರುವ ಈ ಹತ್ಯೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆಯಬೇಕೆಂದು ಆಗ್ರಹಿಸಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೊಲೆ ಪ್ರಕರಣಗಳು ವ್ಯಾಪಕವಾಗುತ್ತಿದ್ದು, ನಾಗರಿಕರು ಭಯಭೀಯರಾಗಿದ್ದಾರೆ ಎಂದು ಅದು ತಿಳಿಸಿದೆ.

- Advertisement -

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಮತ್ತು ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.



Join Whatsapp