ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ಅವರಿಗೆ ಕೊರೊನಾ ಸೋಂಕು ತಗುಲಿದ್ದು ಈ ಬಗ್ಗೆ ಅವರ ಆಡಳಿತ ಕಚೇರಿಯಿಂದ ಮಾಹಿತಿ ಸಿಕ್ಕಿದೆ. 79 ವರ್ಷದ ಜೋ ಬೈಡನ್ ಕೊರೊನಾದ ಲಕ್ಷಣಗಳು ಕಾಣಿಸಿಕೊಂಡಿದ್ದು ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ.
ಅಧ್ಯಕ್ಷ ಜೋ ಬೈಡನ್, ಈ ಹಿಂದೆಯೇ ಕೊರೊನಾ ಲಸಿಕೆಯನ್ನು ಪಡೆದಿದ್ದಾರೆ ಹಾಗೂ ಎರಡು ಬಾರಿ ಬೂಸ್ಟರ್ ಲಸಿಕೆಯನ್ನೂ ಸಹ ಪಡೆದಿದ್ದಾರೆ. ಆದರೆ ಅವರಿಗೆ ಕೊರೊನಾದ ಕೆಲವು ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಕೊರೊನಾ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವೈಟ್ ಹೌಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ
ಶ್ವೇತಭವನದ್ಲಲೇ ಐಸೋಲೇಟ್ ಆಗಿದ್ದು ತಮ್ಮ ಸಂಪೂರ್ಣ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಅಧ್ಯಕ್ಷರ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಬಿಡುಗಡೆಗೊಂಡಿದೆ.