ಕೊಲಂಬೊ: ಶ್ರೀಲಂಕಾದ ನೂತನ ರಾಷ್ಟ್ರಪತಿಯಾಗಿ ರಾನಿಲ್ ವಿಕ್ರಮಸಿಂಘೆ ಪದಗ್ರಹಣ ಮಾಡಿದ ಬೆನ್ನಲ್ಲೇ ಶುಕ್ರವಾರ ನೂತನ ಪ್ರಧಾನಿಯಾಗಿ ದಿನೇಶ್ ಗುಣವರ್ದನ ಅವರನ್ನು ನೇಮಕ ಮಾಡಲಾಗಿದೆ.
ಶುಕ್ರವಾರ ಕೊಲಂಬೊದ ಫ್ಲವರ್ ರೋಡ್ನಲ್ಲಿರುವ ಪ್ರಧಾನಿ ಕಚೇರಿಯಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರ ಆಪ್ತರಾಗಿ ಗುರುತಿಸಿಕೊಂಡಿರುವ 73 ವರ್ಷದ ಗುಣವರ್ಧನೆ ಅವರಿಗೆ ವಿದೇಶಾಂಗ ಸಚಿವ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವವಿದೆ.