ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಯುಪಿ ಸಚಿವ ದಿನೇಶ್ ಖಟಿಕ್

Prasthutha|

ಲಕ್ನೊ: ಎರಡು ದಿನಗಳ ಹಿಂದೆ ಸಿಎಂ ಯೋಗಿ ಆದಿತ್ಯನಾಥ್  ಸರಕಾರದ ವಿರುದ್ಧ ಬಂಡಾಯವೆದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ  ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ದಿನೇಶ್ ಖಟಿಕ್ ಗುರುವಾರ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ಬಳಿಕ  ತಮ್ಮ ಹುದ್ದೆಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

- Advertisement -

ತಾನು ದಲಿತ ಎಂಬ ಕಾರಣಕ್ಕೆ ತನ್ನನ್ನು ಕಡೆಗಣಿಸಲಾಗುತ್ತಿದೆ ಹಾಗೂ  ಅಧಿಕಾರಿಗಳು ತಮ್ಮ ಮಾತನ್ನು ಕೇಳುತ್ತಿಲ್ಲ ಅಧಿಕಾರಿಗಳ ವರ್ಗಾವಣೆಯಲ್ಲಿಯೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಖಟಿಕ್ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.

ನನ್ನ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಮುಂದೆ ಮಂಡಿಸಿದ್ದು, ಅವುಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ಸಿಕ್ಕಿದೆ ಎಂದು  ಸಚಿವರು ತಿಳಿಸಿದರು.

- Advertisement -

ಸಿಎಂ ಯೋಗಿಯೊಂದಿಗಿನ ಖಟಿಕ್ ಭೇಟಿಯ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆಯ ಉತ್ತರ ಪ್ರದೇಶ ಕ್ಯಾಬಿನೆಟ್ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಉಪಸ್ಥಿತರಿದ್ದರು.



Join Whatsapp