ವಿಕಾಸ್ ದುಬೆ ಪೊಲೀಸ್ ಎನ್ ಕೌಂಟರ್ : ಅರ್ಜಿ ವಿಚಾರಣೆ ಅಂತ್ಯಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ವಿಕಾಸ್ ದುಬೆ ಪೊಲೀಸ್ ಎನ್ ಕೌಂಟರ್ ಪ್ರಕರಣದ ತನಿಖಾ ಆಯೋಗವನ್ನು ಪುನರ್ ರಚಿಸಬೇಕು ಹಾಗೂಪರಿಹಾರ ನೀಡಬೇಕು ಎಂದು ಕೋರಿ ಸಲ್ಲಿಸಿರುವ  ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರಅಂತ್ಯಗೊಳಿಸಿದೆ. ಬಳಕ ತನಿಖಾ ಆಯೋಗದ ಶಿಫಾರಸಿನಂತೆ ನಡೆದುಕೊಳ್ಳಲು ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

- Advertisement -

ದುಬೆ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ನೀಡಿರುವ ಹೇಳಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಲುಬಲವಾದ ಕಾರಣಗಳಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಪೋಲೀಸರ ಹೇಳಿಕೆಯನ್ನೇ ಬೆಂಬಲಿಸುತ್ತವೆ. ಎನ್ ಕೌಂಟರ್ ಕುರಿತುಪೋಲಿಸ್ ನೀಡಿರುವ ಹೇಳಿಕೆಯನ್ನು ಚರ್ಚಿಸುವುದಕ್ಕೆ ಸಾರ್ವಜನಿಕರಾಗಲಿ  ಮಾಧ್ಯಮಗಳಾಗಲಿ ಯಾರೂ ಮುಂದೆಬಂದಿಲ್ಲ. ಹಾಗಾಗಿ  ಈ ಘಟನೆಯನ್ನು ನಿರಾಕರಿಸುವಂತಹ ಯಾವ ಪುರಾವೆಗಳು ಸಲ್ಲಿಕೆಯಾಗಿಲ್ಲ’ ಎಂದು ಬಿ.ಎಸ್. ಚೌಹಾಣ್ ನೇತೃತ್ವದ ತನಿಖಾ ಆಯೋಗ ವರದಿಯಲ್ಲಿ ತಿಳಿಸಿತ್ತು.

ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎಸ್. ಚೌಹಾಣ್ ನೇತೃತ್ವದ ತನಿಖಾಆಯೋಗ ಸಿದ್ಧಪಡಿಸಿದ್ದ ವರದಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು. ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠವುಸರ್ಕಾರಕ್ಕೆ ಸೂಚಿಸಿದೆ.

- Advertisement -

2020ರ ಜುಲೈ 2 ಮತ್ತು 3ರ ನಡು ರಾತ್ರಿ ಕಾನ್ಪುರ ಜಿಲ್ಲೆಯ ಬಿಕ್ರು ಹಳ್ಳಿಯಲ್ಲಿರುವ ದುಬೆ ಅವರ ಮನೆಯ ಮೇಲೆಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಡಿಎಸ್ಪಿ ಸೇರಿದಂತೆ ಎಂಟು ಮಂದಿ ಪೊಲೀಸ್ ಸಿಬ್ಬಂದಿಸಾವಿಗೀಡಾಗಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಸ್ ದುಬೆಯನ್ನು ಬಂಧಿಸಿ, ಉಜ್ಜಯಿನಿಯಿಂದ ಕಾನ್ಪುರಕ್ಕೆ ಪೊಲೀಸ್ ವಾಹನದಲ್ಲಿಕರೆದೊಯ್ಯುತ್ತಿದ್ದಾಗ, ಆ ವಾಹನ ಅಪಘಾತಕ್ಕೀಡಾಗಿತ್ತು. ಇದೇ ವೇಳೆ ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಎನ್ಕೌಂಟರ್ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದರು.



Join Whatsapp