ರೈಲ್ವೆ ನಿಲ್ದಾಣದೊಳಗೆ ಸಾಮೂಹಿಕ ಅತ್ಯಾಚಾರ, ನಾಲ್ವರು ರೈಲ್ವೆ ನೌಕರರ ಬಂಧನ

Prasthutha|

ನವದೆಹಲಿ: 30 ವರ್ಷದ ಮಹಿಳೆಯ ಮೇಲೆ ಇಬ್ಬರು ರೈಲ್ವೆ ಉದ್ಯೋಗಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ರೈಲ್ವೆ ನಿಲ್ದಾಣದ ವಿದ್ಯುತ್ ನಿರ್ವಹಣಾ ಸಿಬ್ಬಂದಿ ಕೊಠಡಿಯಲ್ಲಿ ನಡೆದಿದೆ.

- Advertisement -

ಈ ಕುರಿತು ಎಫ್ ಐಆರ್ ದಾಖಲಿಸಲಾಗಿದ್ದು, ಹೊರಗಿನಿಂದ ಕೊಠಡಿಗೆ ಕಾವಲು ಕಾಯುವ ಮೂಲಕ ಕೃತ್ಯಕ್ಕೆ ಸಹಕರಿಸಿದ ಇಬ್ಬರು ಸೇರಿದಂತೆ ನಾಲ್ವರು ರೈಲ್ವೆ ನೌಕರರನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಸತೀಶ್ ಕುಮಾರ್ (35), ವಿನೋದ್ ಕುಮಾರ್ (38), ಮಂಗಲ್ ಚಂದ್ ಮೀನಾ (33) ಮತ್ತು ಜಗದೀಶ್ ಚಂದ್ (37) ಎಂದು ಗುರುತಿಸಲಾಗಿದೆ ಎಂದು ಡಿಸಿಪಿ (ರೈಲ್ವೆ) ಹರೇಂದ್ರ ಸಿಂಗ್ ತಿಳಿಸಿದ್ದಾರೆ.

- Advertisement -

ಎಫ್ಐಆರ್ ದಾಖಲಾದ ಎರಡು ಗಂಟೆಗಳೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ದೆಹಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.



Join Whatsapp