ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ನೀರಜ್ ಚೋಪ್ರಾಗೆ ಬೆಳ್ಳಿ

Prasthutha|

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2022 ರಲ್ಲಿ ನೀರಜ್ ಚೋಪ್ರಾ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.

- Advertisement -


ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಪುರುಷರ ಜಾವೆಲಿನ್ ಥ್ರೋ ಫೈನಲ್ನಲ್ಲಿ 24 ವರ್ಷದ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದಿದ್ದಾರೆ. ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ವರ್ಷದ ಆರಂಭದಲ್ಲಿ ಸ್ಟಾಕ್ಹೋಮ್ ಡೈಮಂಡ್ ಲೀಗ್ ನಲ್ಲಿ ಬೆಳ್ಳಿ ಪದಕದ ಹಾದಿಯಲ್ಲಿ 89.94 ಮೀಟರ್ ದೂರ ಎಸೆದು ರಾಷ್ಟ್ರೀಯ ದಾಖಲೆಯನ್ನು ಸ್ಥಾಪಿಸಿದ ನೀರಜ್, ತಮ್ಮ ಮೊದಲ ಪ್ರಯತ್ನದಲ್ಲೇ 88.39 ಮೀಟರ್ ಎಸೆಯುವ ಮೂಲಕ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದರು.

- Advertisement -

2009ರಿಂದೀಚೆಗೆ ಒಲಿಂಪಿಕ್ಸ್ ಮತ್ತು ವಿಶ್ವ ಚಾಂಪಿಯನ್ ಶಿಪ್ ಎರಡೂ ಪದಕಗಳನ್ನು ಒಂದೇ ಸಮಯದಲ್ಲಿ ಪಡೆದುಕೊಂಡಿರಲಿಲ್ಲ. ಪ್ರತಿ ಬಾರಿಯೂ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತೀಯ ಅಭಿಮಾನಿಗಳನ್ನು ಸಂತಸಗೊಳಿಸುವ ಚೋಪ್ರಾ ಈ ಬಾರಿ ಬೆಳ್ಳಿ ಪದಕ ಗೆದ್ದು ಸ್ವಲ್ಪ ನಿರಾಸೆ ಮೂಡಿಸಿದ್ದಾರೆ.



Join Whatsapp