ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಆರು ಮಂದಿ ಶಂಕಿತರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಲ್ಲದೆ, ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಪತ್ತೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಆರೋಪಿಗಳ ಜಾಡು ಹಿಡಿದು ಮೂರು ತಂಡಗಳು ಈಗಾಗಲೇ ಕೇರಳ, ಮಡಿಕೇರಿ, ಹಾಸನಕ್ಕೆ ತೆರಳಿವೆ. ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ಶೋಧ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.