ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ; ಯಾಸಿನ್ ಮಲಿಕ್ ಆಸ್ಪತ್ರೆಗೆ ದಾಖಲು

Prasthutha|

ನವದೆಹಲಿ: ತಿಹಾರ್ ಜೈಲಿನಲ್ಲಿ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಡಾ.ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ರಕ್ತದ ಒತ್ತಡಲ್ಲಿ ಏರುಪೇರಾದ ಕಾರಣ ಅವರನ್ನು ಹೆಚ್ಚಿನ ಪರೀಕ್ಷೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮೊದಲು ಅವರಿಗೆ  ಐವಿ ಮೂಲಕ ದ್ರವಾಹಾರವನ್ನು ನೀಡಲಾಗುತ್ತಿತ್ತು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

ತಿಹಾರ್ ಜೈಲಿನ ಜೈಲು ಸಂಖ್ಯೆ 7 ರಲ್ಲಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿ, ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಜುಲೈ 22 ರಿಂದ  ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.



Join Whatsapp