ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಆ. 1ರವರೆಗೆ ಸಂಜೆ 6ಕ್ಕೆ ಅಂಗಡಿಗಳು ಬಂದ್

Prasthutha|

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಸಂಜೆ 6 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ನಿಯಮ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -


ಇಂದು ಸಂಜೆಯಿಂದ ಆಗಸ್ಟ್1ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿಯಿದೆ. ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ತೀರಾ ಅಗತ್ಯ ವಸ್ತುಗಳು ಲಭ್ಯವಾಗಿರಲಿದ್ದು, ಬಹುತೇಕ ಅಂಗಡಿಗಳನ್ನು ಮುಚ್ಚಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.



Join Whatsapp