ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ‘ರಾಷ್ಟ್ರಪತ್ನಿ’ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.
ನಿಮ್ಮ ಸ್ಥಾನಕ್ಕೆ ಅಗೌರವ ತರುವ ವಿವಾದಾತ್ಮಕ ಪದವನ್ನು ಬಳಸಿದ್ದಕ್ಕಾಗಿ ನಾನು ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಅದು ಬಾಯ್ತಪ್ಪಿನಿಂದ ಸಂಭವಿಸಿದ್ದಾಗಿದೆ. ಆ ಹೇಳಿಕೆಗೆ ನಾನು ಕ್ಷಮೆಯಾಚಿಸುತ್ತಿದ್ದೇನೆ ಮತ್ತು ಅದನ್ನು ಸ್ವೀಕರಿಸುವಂತೆ ವಿನಂತಿಸುತ್ತೇನೆ ಎಂದು ಅವರು ಮುರ್ಮು ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ವೀಡಿಯೊ ತುಣುಕಿನಲ್ಲಿ ಉಲ್ಲೇಖಿಸಿದ್ದು, ಸಂಸತ್ತಿನಲ್ಲಿ ಭಾರಿ ವಿವಾದ ಭುಗಿಲೆದ್ದಿತು.
ಸಂಸತ್ತಿನಲ್ಲಿ ಪ್ರತಿಭಟಿಸಿದ ಬಿಜೆಪಿ ಸಂಸದರು ಅವರ ಹೇಳಿಕೆಯನ್ನು ಟೀಕಿಸಿದ್ದರು. ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಚೌಧುರಿ ಅವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.