ಸುರತ್ಕಲ್ ಕೊಲೆ ಪ್ರಕರಣ | ಒಟ್ಟು 21 ಶಂಕಿತರ ವಿಚಾರಣೆ !

Prasthutha|

ಮಂಗಳೂರು: ಸುರತ್ಕಲ್’ನಲ್ಲಿ ನಡೆದ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು 21 ಶಂಕಿತ ಆರೋಪಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

- Advertisement -

ಆರಂಭದಲ್ಲಿ 14 ಶಂಕಿತರನ್ನು ವಿಚಾರಣೆ ನಡೆಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಇದೀಗ ಒಟ್ಟು 21 ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೊಲೆ ಪ್ರಕರಣದಲ್ಲಿ ಇವರ ಪಾತ್ರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಶಂಕಿತರು ಯಾವುದಾದರೂ ಸಂಘಟನೆಗೆ ಸೇರಿದವರೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಲ್ಲಿ ಸಂಘಟನೆಗೆ ಸೇರಿದ್ದಾರಾ ಅಥವಾ ಇಲ್ಲವೇ ಎಂಬುದು ಮುಖ್ಯವಲ್ಲ ಎಂದು ತಿಳಿಸಿದರು.

- Advertisement -

ಜುಲೈ 28 ರಂದು ದುಷ್ಕರ್ಮಿಗಳ ತಂಡವೊಂದು ಮುಹಮ್ಮದ್ ಫಾಝಿಲ್ ನನ್ನು ಮಾರಕಾಯುಧಗಳಿಂದ ಕಡಿದು ಕೊಲೆ ನಡೆಸಿತ್ತು. ಘಟನೆಯ ಬಳಿಕ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.



Join Whatsapp