ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ: SDPI ಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ದೂರು

Prasthutha|

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ಎನ್ನುವವರ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದವರ ಮೇಲೆ SDPI ದೂರು ದಾಖಲಿಸಿದೆ

- Advertisement -

ಹಿರೆಬೈಲಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಗಿರೀಶ್ ಹೆಮ್ಮಕ್ಕಿ ಎಂಬ ವ್ಯಕ್ತಿ ಮೀನು ಮಾರಾಟಗಾರರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೋಮು ಭಾವನೆ ಕೆರಳಿಸಿ, ಕೋಮು ಗಲಭೆಗೆ ಪ್ರಚೋದಿಸುವ ಯತ್ನ ನಡೆಸಿದ್ದಾನೆ.

ಘಟನೆಯನ್ನು ವಿರೋಧಿಸಿ ಈತನ ವಿರುದ್ಧ ಹಾಗೂ ಪ್ರತಿಭಟನೆಯ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ SDPI ಮೂಡಿಗೆರೆಯ ಪ್ರಧಾನ ಕಾರ್ಯದರ್ಶಿ ಶರೀಫ್ ಎಂ.ಯು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದ್ದಾರೆ.



Join Whatsapp