ಗೃಹ ಸಚಿವರ ಮನೆ ಮೇಲಿನ ABVP ದಾಳಿ ಕಾನೂನು ಕುಸಿತಕ್ಕೆ ಸಾಕ್ಷಿ: ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರಿಂದ ದಾಳಿ ನಡೆದ ಕುರಿತು ಪ್ರತಿಕ್ರಯಿಸಿದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಇಂತಹ ಗೃಹ ಸಚಿವರಿಂದ ನಾಗರಿಕರ ಸುರಕ್ಷತೆಯನ್ನು ಹೇಗೆ ಖಚಿತಪಡಿಸಬಹುದು ಎಂದು ಪ್ರಶ್ನಿಸಿದ್ದಾರೆ.

- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ಕ್ಕೆ ಸೇರಿದ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಸದಸ್ಯರು ನಗರದಲ್ಲಿರುವ ಗೃಹ ಸಚಿವರ ಅಧಿಕೃತ ನಿವಾಸಕ್ಕೆ ನುಗ್ಗಿ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಸಚಿವರ ಮನೆ ಮೇಲೆ ದಾಳಿ ನಡೆಸಿದ್ದರು ಮತ್ತು ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ, “ಹೇಡಿ ಗೃಹ ಸಚಿವ” ಎಂದು ಕರೆದಿದ್ದರು

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಗೃಹ ಇಲಾಖೆಯ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೃಹ ಇಲಾಖೆಯ ಗುಪ್ತಚರ ವಿಭಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಖರ್ಗೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂಬುವುದಕ್ಕೆ ಇದುವೇ ದೊಡ್ಡ ಸಾಕ್ಷಿ ಎಂದು ಹೇಳಿದರು.

- Advertisement -

ಸಚಿವರು ತಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಾಗದಿದ್ದರೆ ಜನರ ರಕ್ಷಣೆಯನ್ನು ಹೇಗೆ ಖಾತ್ರಿಪಡಿಸಲು ಸಾಧ್ಯ?. ರಾಜ್ಯದಲ್ಲಿ ಸಾಮಾನ್ಯ ಸ್ಥಿತಿಯನ್ನು ತರಲು ಸರ್ಕಾರವು ತನ್ನ ಪಕ್ಷದ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.



Join Whatsapp