ಬೆಂಗಳೂರು: ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ-ವಿರೋಧಿ ಸಂಸ್ಥೆ (ಎಸಿಬಿ) ನೋಟಿಸ್ ನೀಡಿದೆ. . ಯಾವುದೇ ಕಾರಣ ಹೇಳದೆ ಆಗಸ್ಟ್ 6 ರಂದು ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಕಳೆದ ಜುಲೈ 5 ರಂದು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯ ಜಮೀರ್ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್ ನ ಫ್ಲ್ಯಾಟ್, ಸದಾಶಿವನಗರದ ಗೆಸ್ಟ್ ಹೌಸ್, ಬನಶಂಕರಿಯ ಜಿ.ಕೆ.ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆಎಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ 2000% ರಷ್ಟು ಅಕ್ರಮ ಆಸ್ತಿಗಳಿಕೆ ಮಾಡಿರುವ ದಾಖಲೆ ಪತ್ತೆಯಾಗಿತ್ತು ಎನ್ನಲಾಗಿದೆ.
ಶಾಸಕರ ಆಸ್ತಿಗೆ ಸಂಬಂಧಿಸಿದ ಆದಾಯದ ಮೂಲದ ದಾಖಲೆ ತರುವಂತೆ ಸೂಚನೆ ನೀಡಿದ್ದು, ಶಾಸಕ ಜಮೀರ್ ಕಳೆದ ಒಂದು ತಿಂಗಳಿನಿಂದ ವಿಚಾರಣೆಗೆ ಕಾಲವಕಾಶ ಕೋರುತ್ತಿದ್ದರು. ದಾಳಿ ನಡೆದ ಒಂದು ತಿಂಗಳ ನಂತರ ಜಮೀರ್ ವಿಚಾರಣೆ ನಡೆಸಲಿದೆ. ಈ ವಿಚಾರಣೆಗೆ ಜಮೀರ್ ಕಡ್ಡಾಯವಾಗಿ ಹಾಜರಾಗುವಂತೆ ಶಾಸಕರಿಗೆ ಎಸಿಬಿಯು ಆದೇಶ ನೀಡಿದೆ