ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್

Prasthutha|

ನವದೆಹಲಿ: ತಿಹಾರ್ ಜೈಲಿನಲ್ಲಿ ಜುಲೈ 22 ರಿಂದ  ಉಪವಾಸ ಸತ್ಯಾಗ್ರಹ ಆರಂಭಿಸಿದ್ದ  ನಿಷೇಧಿತ ಜಮ್ಮು ಮತ್ತು ಕಾಶ್ಮೀರ ವಿಮೋಚನಾ ರಂಗದ ಮುಖ್ಯಸ್ಥ ಯಾಸಿನ್ ಮಲಿಕ್ ಅವರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಶ್ವಾಸನೆ ನೀಡಿದ ನಂತರ ಉಪವಾಸವನ್ನು ಕೊನೆಗೊಳಿಸಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ತಿಹಾರ್ ಜೈಲಿನ ಜೈಲು ಸಂಖ್ಯೆ 7 ರಲ್ಲಿದ್ದ ಕಾಶ್ಮೀರಿ ಪ್ರತ್ಯೇಕತಾವಾದಿ ಮಲಿಕ್ ತನ್ನ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ನಿರಶನ ನಡೆಸುತ್ತಿದ್ದರು .

ಕಾರಾಗೃಹಗಳ ಡಿಜಿ ಸಂದೀಪ್ ಗೋಯಲ್ ಅವರ ಕೋರಿಕೆಯ ಮೇರೆಗೆ ಮಲಿಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಎರಡು ತಿಂಗಳ ಅವಧಿಗೆ ಮುಂದೂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp