ಅತ್ಯಧಿಕ ತೆರಿಗೆ ಸಂಗ್ರಹದಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

Prasthutha|

ಬೆಂಗಳೂರು: ರಾಜ್ಯದಲ್ಲಿ ಜುಲೈ ತಿಂಗಳಿನ  ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಯು ಕಳೆದ ವರ್ಷದ ಇದೇ ಅವಧಿಯಲ್ಲಿ ಸಂಗ್ರಹವಾಗಿದ್ದಕ್ಕಿಂತ ಶೇ 45 ರಷ್ಟು ಹೆಚ್ಚಾಗಿದ್ದು, ಅತ್ಯಧಿಕ ತೆರಿಗೆ ಸಂಗ್ರಹದಲ್ಲಿ ಕರ್ನಾಟಕವು ಮಹಾರಾಷ್ಟ್ರದ ನಂತರ ಎರಡನೇ ಸ್ಥಾನದಲ್ಲಿದೆ.

- Advertisement -

ಜುಲೈ ತಿಂಗಳಿನಲ್ಲಿ ₹ 9,795 ಕೋಟಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿತ್ತು.  ಇದು ಇತರ ದೊಡ್ಡ ರಾಜ್ಯಗಳಾದ ಗುಜರಾತ್, ತಮಿಳುನಾಡು ಮತ್ತು ಅವಿಭಜಿತ ಆಂಧ್ರಪ್ರದೇಶಗಳಿಗೆ ಹೋಲಿಸಿದರೆ ಈ ತಿಂಗಳಲ್ಲಿ ಏರಿಕೆಯಾದ ಅತ್ಯಧಿಕ ಜಿಎಸ್ ಟಿ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.



Join Whatsapp