ಮುಂದುವರಿದ ಮಳೆ: ಸುಳ್ಯದಲ್ಲಿ ನಾಳೆಯೂ ಶಾಲೆಗೆ ರಜೆ

Prasthutha|

- Advertisement -

ಮಂಗಳೂರು: ಸುಳ್ಯ ತಾಲೂಕಿನಾದ್ಯಂತ ತೀವ್ರ ಮಳೆ ಮುಂದುವರಿದಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಜುಲೈ 4ರಂದು ರಜೆಯನ್ನು ಘೋಷಿಸಿದ್ದಾರೆ.

ತಾಲೂಕಿನಾದ್ಯಂತ ಮಳೆ ಮುಂದುವರಿದಿದ್ದು, ರಸ್ತೆ, ಸೇತುವೆಗಳು ಜಲಾವೃತಗೊಂಡಿರುವುದಲ್ಲದೇ ಹಲವೆಡೆ ಭೂಕುಸಿತದ ಅಪಾಯವೂ ಇದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -

ಇನ್ನು ಕಡಬ ಮತ್ತಿತರ ತಾಲೂಕುಗಳಲ್ಲಿ ಮಳೆಯ ತೀವ್ರತೆಗನುಸಾರ ಅಗತ್ಯವಿದ್ದಲ್ಲಿ ಕ್ರಮ ಕೈಗೊಳ್ಳಲು ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ‌‌.



Join Whatsapp