ನ್ಯಾಷನಲ್ ಹೆರಾಲ್ಡ್ ಪ್ರಕರಣ: ಯಂಗ್ ಇಂಡಿಯನ್ ಕಚೇರಿಗೆ ಇ.ಡಿ ಸೀಲ್

Prasthutha|

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಯಂಗ್ ಇಂಡಿಯನ್ ಕಚೇರಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಮುಚ್ಚಿದ್ದು, ಕಾಂಗ್ರೆಸ್ ಸಂಸದರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

ದೆಹಲಿ ಪೊಲೀಸರು ನಮ್ಮ ಪ್ರಧಾನ ಕಚೇರಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರ ಮನೆಗಳನ್ನು ಸುತ್ತುವರೆದಿದ್ದಾರೆ. ಇದು ಸೇಡಿನ ರಾಜಕಾರಣದ ಅತ್ಯಂತ ಕೆಟ್ಟ ರೂಪವಾಗಿದೆ. ನಾವು ಸುಮ್ಮನಿರುವುದಿಲ್ಲ. ಮೋದಿ ಸರ್ಕಾರದ ಅನ್ಯಾಯಗಳು ಮತ್ತು ವೈಫಲ್ಯಗಳ ವಿರುದ್ಧ ನಾವು ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಸಂಸ್ಥೆಯ ಪ್ರತಿನಿಧಿಯ ಅನುಪಸ್ಥಿತಿಯಲ್ಲಿ ಮಂಗಳವಾರ ಶೋಧ ನಡೆಸಲು ಸಾಧ್ಯವಾಗದ ಕಾರಣ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಏಜೆನ್ಸಿಯ ಅನುಮತಿಯಿಲ್ಲದೆ ಆವರಣವನ್ನು ತೆರೆಯಬಾರದು ಎಂದೂ ನಿರ್ದೇಶನ ನೀಡಿದೆ. ಅಲ್ಲದೆ, ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯ ಹೊರಗೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

- Advertisement -

ಈ ಕುರಿತು ತಮ್ಮ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಸಂಸದರು ಇಂದು ಸಭೆ ಸೇರಲಿದ್ದಾರೆ.



Join Whatsapp