ಬಿಜೆಪಿ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ, ಚುನಾವಣೆಗೆ ತಯಾರಿ ನಡೆಸಿ: ಅಮಿತ್ ಶಾ

Prasthutha|

ಬೆಂಗಳೂರು: ಸಂಘಪರಿವಾರ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ರಾಜ್ಯ ಬಿಜೆಪಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ.

- Advertisement -

ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಜ್ಯ ಬಿಜೆಪಿಯ ಪ್ರಮುಖರ ಜೊತೆ ಮಹತ್ವದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಈ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದರು.

ಈ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಂತೂರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹಾಗೂ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.



Join Whatsapp