ಹಾಸನ : ಕಾಡಾನೆ ದಾಳಿಯಿಂದ ವ್ಯಕ್ತಿ ಸಾವು ಪ್ರಕರಣ; ವಿವಿಧ ಸಂಘಟನೆಗಳಿಂದ ಸಕಲೇಶಪುರ ಬಂದ್‌ಗೆ ಕರೆ

Prasthutha|

ಸಕಲೇಶಪುರ: ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತ ಮಂಜುನಾಥ್ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ  ತಾಲೂಕಿನಾದ್ಯಂತ ವಿವಿಧ ಸಂಘಟನೆಗಳು ಹಾಗೂ  ರಾಜಕೀಯ ಪಕ್ಷಗಳು ಬಂದ್ ಗೆ ಕರೆ ನೀಡಿವೆ.

- Advertisement -

ವಿವಿಧ ಕನ್ನಡ ಪರಸಂಘಟನೆಗಳಿಂದ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಮಳೆಯ ನಡುವೆಯೇ ಘೋಷಣೆ ಕೂಗುತ್ತಾ ವಿವಿಧ ಸಂಘಟನೆಗಳ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75 ನ್ನು ತಡೆದು ಮಾನವ ಸರಪಳಿ‌ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ತಡೆಯಿಂದ ವಾಹನ ಸವಾರರು ಪರದಾಡುವಂತಾಗಿದೆ.

- Advertisement -

ನಿರಂತರ ಕಾಡಾನೆ ಹಾವಳಿಯಾದರೂ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಸ್ಥಳಕ್ಕೆ ಅರಣ್ಯ ಸಚಿವರು ಹಾಗೂ ಉಸ್ತುವಾರಿ ಸಚಿವರು ಆಗಮಿಸದೇ ಮೃತದೇಹವನ್ನು ತೆಗೆಯುವುದಿಲ್ಲ  ಎಂದು ಪಟ್ಟು ಹಿಡಿದಿದ್ದಾರೆ. ಸಂಬಂಧಿಕರೂ  ಈ ಬಂದ್ ಗೆ ಸಾಥ್ ನೀಡಿದ್ದಾರೆ.



Join Whatsapp