ಕೊಲ್ಕತ್ತಾ : ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ರಾಮ್ ಪುರಹತ್ ನ ಮಲ್ಲರ್ ಪುರ ಬಳಿ ಈ ಅಪಘಾತ ಸಂಭವಿಸಿದೆ.
ಜನರಿಂದ ತುಂಬಿದ್ದ ಆಟೋ ಎದುರಿಗೆ ಬರುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 8 ಮಹಿಳಾ ಕೃಷಿ ಕಾರ್ಮಿಕರು ಹಾಗೂ ಆಟೋ ಚಾಲಕ ಮೃತಪಟ್ಟಿರುವುದಾಗಿ ಬಿರ್ ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಹೇಳಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಸಂಬಂಧಿಕರಿಗೆ 2 ಲಕ್ಷ ಹಾಗೂ ಗಾಯಾಗಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.