ಹೊಸನಗರ: ತಾಲೂಕಿನಲ್ಲಿ ದಾಖಲೆಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಮೂರು ಹೋಬಳಿಗಳ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರ ಸೂಚನೆ ಮೇರೆ ನಗರ , ಕಸಬಾ ಹಾಗೂ ಹುಂಚ ಹೋಬಳಿಯ ಶಾಲೆಗಳಿಗೆ ರಜೆ ನೀಡಲಾಗಿದೆ.
ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಮಳೆಯ ತೀವ್ರತೆಯನ್ನು ಗಮನಿಸಿ ರಜೆ ನೀಡುವ ಅಧಿಕಾರವನ್ನು ಶಾಲೆಗಳ ಮುಖ್ಯಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಅವರಿಗೆ ನೀಡಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.