ನವದೆಹಲಿ: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಿರ್ಗಮಿತ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉಪ ರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಚುನಾವಣೆಯಲ್ಲಿ ಮಣಿಸಿದ್ದರು.
ಉಪ ರಾಷ್ಟ್ರಪತಿ ಹುದ್ದೆಯು ದೇಶದಲ್ಲಿ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಎನಿಸಿಕೊಂಡಿದೆ. ಒಂದು ವೇಳೆ ರಾಷ್ಟ್ರಪತಿಯ ಸ್ಥಾನ ತೆರವಾದರೆ ಹೊಸಬರ ಆಯ್ಕೆ ಆಗುವವರೆಗೆ ತಾತ್ಕಾಲಿಕವಾಗಿ ಆ ಸ್ಥಾನವನ್ನು ಉಪ ರಾಷ್ಟ್ರಪತಿಗಳು ನಿಭಾಯಿಸುತ್ತಾರೆ. ಉಪರಾಷ್ಟ್ರಪತಿಗಳು ರಾಜ್ಯಸಭೆಯ ಸಭಾಧ್ಯಕ್ಷರಾಗಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ.