ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಚೇತನ್ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಗೋಪಾಲನಗರದ ಲಗ್ಗೆರೆಯಲ್ಲಿ ನಡೆದಿದೆ.
ಲಗ್ಗೆರೆಯ ಮಾರುತಿನಗರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ಚೇತನ್ (25) ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮಾರುತಿನಗರದ ನಿವಾಸದಲ್ಲಿ ಕುಟುಂಬದವರು ಮನೆಯಲ್ಲಿದ್ದಾಗಲೇ ತಮ್ಮ ಕೊಠಡಿಯಲ್ಲಿ ನಿನ್ನೆ ರಾತ್ರಿ 7ರ ಸುಮಾರಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.