ಜಪ್ಪಿನಮೊಗರು ಬಳಿ ಹಿಟ್ ಆ್ಯಂಡ್ ರನ್: ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕ ಮೃತ್ಯು, ಓರ್ವ ಗಂಭೀರ

Prasthutha|

ಉಳ್ಳಾಲ: ಅಪರಿಚಿತ ವಾಹನವೊಂದು ರಸ್ತೆ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ನಡೆದಿದೆ.

- Advertisement -


ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್ (23) ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ, ಗೋಪಾಲ್ ಪೂಜಾರಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.


ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp