ನವದೆಹಲಿ: ಇನ್ಸ್ಟಾಗ್ರಾಮ್ನಲ್ಲಿ ಹುಡುಗಿಯ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಮುಸ್ಲಿಮ್ ಬಾಲಕನಿಗೆ ಭಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ಸಮೀಪದ ಗುಲಾವೋತಿ ಎಂಬಲ್ಲಿ ನಡೆದಿದೆ.
ಹಲ್ಲೆಗೊಳಗಾದ ಬಾಲಕನನ್ನು 17 ವರ್ಷದ ಸಾಹಿಲ್ ಸಿದ್ದೀಕಿ ಎಂದು ಗುರುತಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಂತ್ರಸ್ತ ಬಾಲಕನ ತಂದೆ, ನನ್ನ ಮಗನ ಮೇಲೆ ಸುಳ್ಳಾರೋಪ ಹೊರಿಸಿ ಹಲ್ಲೆ ನಡೆಸಲಾಗಿದೆ ಎಂದು ದೂರಿದ್ದಾರೆ.
ಬಾಲಕನಿಗೆ ಹಲ್ಲೆ ನಡೆಸುತ್ತಿರುವ ವೀಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗಿದ್ದು, ಹಲ್ಲೆಗೊಳಗಾದ ಮಗನ ವಿರುದ್ಧ ಪ್ರಕರಣ ದಾಖಲಾಗಿ ಪೊಲೀಸರು ಮನೆಗೆ ಬಂದು, ಮಗನನ್ನು ಠಾಣೆಗೆ ಕರೆದುಕೊಂಡು ಬರುವಂತೆ ಸೂಚಿಸಿದಾಗ ಘಟನೆ ಬೆಳಕಿಗೆ ನನಗೆ ತಿಳಿಯಿತು ಎಂದು ಸಂತ್ರಸ್ತನ ತಂದೆ ರೌಫ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.