ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಫೋಟೊ ಕೈಬಿಟ್ಟಿದ್ದೇವೆ: ಎನ್. ರವಿಕುಮಾರ್

Prasthutha|

ಬೆಂಗಳೂರು: ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸಮರ್ಥಿಸಿಕೊಂಡಿದ್ದಾರೆ.

- Advertisement -


ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರೂ ದೇಶ ವಿಭಜನೆಗೆ ಕಾರಣರಾದವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರೂ ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಎಂದು ಗಾಂಧೀಜಿ ಹೇಳಿದ್ದರು. ಆದರೆ, ನೆಹರು ಕಾಂಗ್ರೆಸ್ ವಿಸರ್ಜಿಸಲಿಲ್ಲ. ಹಾಗಾಗಿ ನಾವು ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಕೈಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.



Join Whatsapp