ಮಂಗಳೂರು: 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಸೋಮವಾರ ನಗರದ ನೆಹರೂ ಮೈದಾನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತಾಲೂಕು ಕೇಂದ್ರಗಳಲ್ಲೂ ಧ್ವಜಾರೋಹಣ ನೆರವೇರಿಸಲಾಗಿದೆ. ಅಲ್ಲದೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳಲ್ಲೂ, ರಾಜಕೀಯ ಪಕ್ಷಗಳ ಕಚೇರಿಗಳಲ್ಲೂ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಗಿದೆ.