ಚಿಕ್ಕಮಗಳೂರು: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳುವಳ್ಳಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಕಿರಣ್ ಎಂಬವರ ಸ್ಟಾರ್ ಸಿಟಿ ಬೈಕ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಬೈಕ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ.
ಮನೆಯ ಕಿಟಕಿಗಳಿಗೂ ಹಾನಿಯಾಗಿದ್ದು ಶಬ್ಧ ಕೇಳಿ ಗಾಬರಿಗೊಂಡ ಪಕ್ಕದ ಮನೆಯವರು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.