ಶಿವಮೊಗ್ಗ : ಗಲಭೆ ಹಿನ್ನೆಲೆ; ದ್ವಿಚಕ್ರ ವಾಹನದಲ್ಲಿ ಇಬ್ಬರ ಓಡಾಟಕ್ಕೆ ಬ್ರೇಕ್

Prasthutha|

ಶಿವಮೊಗ್ಗ: ನಗರ ವ್ಯಾಪ್ತಿಯಲ್ಲಿ ಮುಂದಿನ ಮೂರು ದಿನಗಳ ಕಾಲ ದ್ವಿಚಕ್ರ ವಾಹನದಲ್ಲಿ ಇಬ್ಬರು ಸವಾರರ ಓಡಾಟ ನಿಷೇಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

- Advertisement -


ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಹಾಗೂ ಚೂರಿ ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಪದೇ ಪದೇ ಕೋಮು ಸೌಹಾರ್ದ ಕೆಡಿಸುವ ಘಟನೆಗಳು ನಡೆಯುತ್ತಿದ್ದು, ಚೂರಿ ಇರಿತದಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳು ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆಜಿಲ್ಲಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದ್ದು ಆರೋಪಿಗಳ ಆಸ್ತಿ ಮುಟ್ಟುಗೋಲಿನಂತಹ ಕ್ರಮಕ್ಕೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

- Advertisement -


ಚೂರಿ ಇರಿತ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಯಾವುದಾದರೂ ಸಂಘಟನೆಗಳಿಗೆ ಸೇರಿದವರು ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪೂರ್ವ ವಲಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಪಡೆ ಕರೆಸಲಾಗುತ್ತಿದೆ ಎಂದು ತಿಳಿಸಿದರು.



Join Whatsapp