ಕಾರಿಗೆ ಕಂಟೈನರ್ ಡಿಕ್ಕಿ: ಪೊಲೀಸ್ ಕಾನ್ಸ್ ಸ್ಟೆಬಲ್, ಮಗು ಸೇರಿ ಐವರು ಸಾವು

Prasthutha|

ಬೀದರ್: ವೇಗವಾಗಿ ಬಂದ ಕಂಟೈನರ್ ಕಾರಿಗೆ ಡಿಕ್ಕಿ ಹೊಡೆದು ಪೊಲೀಸ್ ಪೇದೆ 2 ವರ್ಷದ ಮಗು ಸೇರಿ ಐವರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ.

- Advertisement -

ಹೈದರಾಬಾದ್ ನಲ್ಲಿ ಪೊಲೀಸ್ ಪೇದೆ ಆಗಿರುವ ಬೇಗಂ ಪೇಟದ ಗಿರಿಧರ್ (45) ಪತ್ನಿ ಅನಿತಾ (36) ಮಯಾಂಕ್ (2 ) ಅನಿತಾ ತಂಗಿ ಮಗಳು ಪ್ರಿಯಾಂಕಾ (15) ಹಾಗೂ ಕಾರು ಚಾಲಕ ದಿನೇಶ್ (35) ಮೃತಪಟ್ಟ ದುರ್ದೈವಿಗಳು.

ಹೈದ್ರಾಬಾದ್ ನಿಂದ ಕಲಬುರಗಿಯ ಗಾಣಗಾಪುರ ದೇವಸ್ಥಾನಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಕುಟುಂಬ ಬೀದರ್ ತಾಲೂಕಿನ ಭಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

- Advertisement -

ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ 2 ವರ್ಷದ ಮಯಾಂಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಗಿರಿಧರ ಪುತ್ರ 12 ವರ್ಷದ ಹರ್ಷವರ್ಧನಗೆ ಯಾವುದೇ ಗಾಯಗಳಾಗದೇ ಪಾರಾಗಿದ್ದಾನೆ. ಇನ್ನು ಘಟನೆಯಲ್ಲಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ಬೀದರ್ ಜಿಲ್ಲಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



Join Whatsapp