ತುಮಕೂರು: ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರಿಸಲಾಗಿದ್ದ ಬ್ರಿಟಿಷರೊಂದಿಗೆ ಕ್ಷಮೆಯಾಚಿಸಿದ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಬೆನ್ನಲ್ಲೇ ತುಮಕೂರಿನ ಎಂಪ್ರೆಸ್ ಕಾಲೇಜು ಮುಂಭಾಗ ಸಾವರ್ಕರ್ ಫ್ಲೆಕ್ಸ್ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ.
ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕಾಗಿ ತುಮಕೂರು ನಗರದಲ್ಲಿ ಬಿಜೆಪಿ ಶಾಸಕ ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಾಕಲಾಗಿದೆ.
ಸಾವರ್ಕರ್ ಫ್ಲೆಕ್ಸ್ ಅನ್ನು ತುಮಕೂರು ಪಾಲಿಕೆ ಅಧಿಕಾರಿಗಳು ತೆರವು ಮಾಡುವ ಕಾರ್ಯ ಮಾಡಿದ್ದಾರೆ. ಘಟನೆ ವಿಕೋಪಕ್ಕೆ ಹೋಗುತ್ತದೆ ಎಂದು ಮುಂಜಾಗೃತೆಯಿಂದ ಎಲ್ಲಾ ಫ್ಲೆಕ್ಸ್ ಗಳನ್ನು ಪಾಲಿಕೆ ತೆರವು ಮಾಡಿದೆ ಎಂದು ತಿಳಿದುಬಂದಿದೆ.