ಜಮ್ಮು-ಕಾಶ್ಮೀರ: ನದಿಗೆ ಬಸ್ ಉರುಳಿ 6 ಐಟಿಬಿಪಿ ಸಿಬ್ಬಂದಿ ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

Prasthutha|

ಪಹಲ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಬಸ್ಸೊಂದು ಬ್ರೇಕ್ ವೈಫಲ್ಯದಿಂದ ರಸ್ತೆ ಬದಿಯ ನದಿಗೆ ಉರುಳಿದ ಪರಿಣಾಮ ಆರು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿರುವ ಭೀಕರ ಘಟನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿದೆ.

- Advertisement -

ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.

37 ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಜೆ-ಕೆ ಪೊಲೀಸರನ್ನು ಹೊತ್ತ ನಾಗರಿಕ ಬಸ್ ಚಂದನ್ವರಿಯಿಂದ ಪಹಲ್ಗಾಮ್ ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಐಟಿಬಿಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಅಮರನಾಥ ಯಾತ್ರೆಗಾಗಿ ಈ ಪ್ರದೇಶದಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು.

“ನಾವು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ನಿರ್ವಹಣೆಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಹೆಚ್ಚಿನ ಯೋಧರಿಗೆ ಗಾಯಗಳಾಗಿರುವ ಸಾಧ್ಯತೆ ಇದೆ . ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿ ಹೇಳಿದರು.



Join Whatsapp