ಸರಕಾರದ ಬಳಿ ಸಾಕ್ಷಿ ಇದ್ದರೆ PFI,SDPI ಬ್ಯಾನ್ ಮಾಡಲಿ: ಸಿದ್ದರಾಮಯ್ಯ

Prasthutha|

- Advertisement -

ಬೆಂಗಳೂರು: ಸರಕಾರದ ಬಳಿ ‘ಪಿಎಫ್‌ಐ ಮತ್ತು ಎಸ್‌ಡಿಪಿಐ ವಿರುದ್ಧ ಸೂಕ್ತ ಸಾಕ್ಷ್ಯಾಧಾರ ಇದ್ದರೆ ಸಂಘಟನೆಗಳನ್ನು ನಿಷೇಧ ಮಾಡಲಿ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

“ಪಿಎಫ್‌ಐ, ಎಸ್‌ಡಿಪಿಐ ಈ ಯಾವ ಸಂಘಟನೆಗಳೇ ಆಗಲಿ ಸಮಾಜದ ಸಾಮರಸ್ಯ ಹಾಳುಮಾಡುತ್ತಿವೆ, ಗಲಭೆಗಳಿಗೆ ಕಾರಣವಾಗುತ್ತಿವೆ ಎಂಬುದಕ್ಕೆ ಸೂಕ್ತ ಸಾಕ್ಷ್ಯಾಧಾರ ಇದ್ದರೆ ಬಿಜೆಪಿ ಕರ್ನಾಟಕ ಸರಕಾರ ಅಂತಹಾ ಸಂಘಟನೆಗಳನ್ನು ನಿಷೇಧ ಮಾಡಲಿ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

‘ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೆ ಸರ್ಕಾರ ಇದೆ. ಆದರೂ ಯಾಕೆ ಸುಮ್ಮನಿದ್ದೀರ..?” ಎಂದು ಪ್ರಶ್ನಿಸಿದ್ದಾರೆ.



Join Whatsapp