ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿವಾದದ ಗಲಭೆ ಹಿನ್ನೆಲೆ; ಮುಂದುವರಿದ ನಿಷೇಧಾಜ್ಞೆ

Prasthutha|

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿನಡೆದ ಗಲಭೆಯ ಬಳಿಕ ಜಿಲ್ಲೆಯ ಸೆಕ್ಷನ್ 144 ಜಾರಿಯಲ್ಲಿದ್ದು,ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

- Advertisement -

ಈ ಮಧ್ಯೆ  ಘಟನೆಗೆ ರಾಜಕೀಯ ಬಣ್ಣ ಬೆರೆತಿದ್ದು, ಬಿಜೆಪಿ-ಕಾಂಗ್ರೆಸ್ ನಾಯಕರ ಮಧ್ಯೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ಪ್ರಾರಂಭವಾಗಿವೆ.ಘಟನೆಗೆ ಕಾಂಗ್ರೆಸ್ ನಾಯಕರು ಕಾರಣ ಎಂದು ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

ಇಂದು ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದಲ್ಲಿ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸಲಿವೆ.  ಸೆಕ್ಷನ್ 144 ನಿಷೇಧಾಜ್ಞೆ ಜಾರಿಯಲ್ಲಿದ್ದು ಭದ್ರತೆಯ ಭಾಗವಾಗಿ

- Advertisement -

ನಗರದಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಲಾಗಿದ್ದು, ನಗರದ ಹಳೆ ಭಾಗಗಳು ಮತ್ತು ಹತ್ತಿರದ ಪ್ರದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.



Join Whatsapp