ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ: 50ಕ್ಕೂ ಹೆಚ್ಚು ಮಂದಿಗೆ ಗಾಯ

Prasthutha|

ಗೊಂಡಿಯಾ (ಮಹಾರಾಷ್ಟ್ರ): ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದು ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದ ಪರಿಣಾಮ 50 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬುಧವಾರ ಮಹಾರಾಷ್ಟ್ರದ ಗೊಂಡಿಯಾದಲ್ಲಿ ನಡೆದಿದೆ.

- Advertisement -

ಬೆಳಗಿನ ಜಾವ 2.30 ಕ್ಕೆ ಈ ಘಟನೆ ಸಂಭವಿಸಿದ್ದು, ಯಾವುದೇ ಸಾವು ವರದಿಯಾಗಿಲ್ಲ.

ಪ್ಯಾಸೆಂಜರ್ ರೈಲು ಛತ್ತೀಸ್ ಗಢದ ಬಿಲಾಸ್ ಪುರದಿಂದ ರಾಜಸ್ಥಾನದ ಜೋಧಪುರಕ್ಕೆ ಹೋಗುತ್ತಿತ್ತು. ಸಿಗ್ನಲ್ ಸಮಸ್ಯೆಯಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಚಾಲಕ ತುರ್ತು ಬ್ರೇಕ್ ಹಾಕಿದರೂ  ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.



Join Whatsapp