ನೇಮಕಗೊಂಡ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ಗುಲಾಂ ನಬಿ ಆಝಾದ್ ಗುಡ್ ಬೈ

Prasthutha|

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾದ ಕೆಲವೇ ಕ್ಷಣಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಝಾದ್ ಅವರು ರಾಜೀನಾಮೆ ನೀಡಿದ್ದಾರೆ.

- Advertisement -

ಆಝಾದ್ ಅವರು ಆರೋಗ್ಯ ಕಾರಣಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರು ಇದನ್ನು ಕಾಂಗ್ರೆಸ್ ನಾಯಕತ್ವಕ್ಕೆ ತಿಳಿಸಿದ್ದಾರೆ ಮತ್ತು ತಮಗೆ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಮಂಗಳವಾರ ವಿಕರ್ ರಸೂಲ್ ವಾನಿ ಅವರನ್ನು ಪಕ್ಷದ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷರಾಗಿ ಮತ್ತು ರಮಣ್ ಭಲ್ಲಾ ಅವರನ್ನು ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.

- Advertisement -

ಈ ಹಿಂದೆ ಜಮ್ಮು-ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಆಝಾದ್ ಅವರ ನಿಕಟವರ್ತಿ ಗುಲಾಮ್ ಅಹ್ಮದ್ ಮಿರ್ ಅವರು ಹೊಂದಿದ್ದರು.

ಗುಲಾಂ ನಬಿ ರಾಜೀನಾಮೆ ನೀಡಿದ ಸಂದರ್ಭದಲ್ಲೇ ಕಾಂಗ್ರೆಸ್ ಮಂಗಳವಾರ ವಿಕರ್ ರಸೂಲ್ ವಾನಿ ಅವರನ್ನು ಕಾಂಗ್ರೆಸ್ ಪಕ್ಷದ ಜಮ್ಮು ಮತ್ತು ಕಾಶ್ಮೀರದ ಮುಖ್ಯಸ್ಥರನ್ನಾಗಿ ನೇಮಿಸಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಗುಲಾಮ್ ಅಹ್ಮದ್ ಮಿರ್ ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ.



Join Whatsapp