ಅಹಮದಾಬಾದ್: ಗುಜರಾತ್ ಎಟಿಎಸ್ ತನ್ನ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ತನಗೆ ಜಾಮೀನು ನೀಡುವಂತೆ ಮಾನವ ಹಕ್ಕುಗಳ ಹೋರಾಟಗಾರ್ತಿ ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.
ಗುಜರಾತ್ ಹತ್ಯಾಕಾಂಡಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ರಾಜ್ಯದ ಉನ್ನತ ಅಧಿಕಾರಿಗಳನ್ನು ಸಿಲುಕಿಸಲು ತೀಸ್ತಾ ಸೆಟಸ್ವಾಡ್ ಅವರು ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದಾರೆ ಎಂದು ಎಟಿಎಸ್ ಆರೋಪಿಸಿದೆ.
ಸುಪ್ರೀಮ್ ಕೋರ್ಟ್’ನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದ ಮುಂದೆ ತೀಸ್ತಾ ಸೆಟಲ್ವಾಡ್ ಪರ ವಕೀಲೆ ಅಪರ್ಣಾ ಭಟ್ ಅವರು ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 22 ರಂದು ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೀಠದ ಮುಂದೆ ಈ ಅರ್ಜಿಯ ವಿಚಾರಣೆಗೊಳಪಡಿಸಲು ಸಿಜೆಐ ಒಪ್ಪಿದರು.
ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶದ ವಿರುದ್ಧ ಸೆಟಲ್ವಾಡ್ ಅವರು ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.