ಬೆಂಗಳೂರು: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ 200 ಕೋಟಿ ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.
ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಇ.ಡಿ. ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಉದ್ಯಮಿ ಮಾನವೀಂದರ್ ಸಿಂಗ್ ಜೈಲಿನಲ್ಲಿ ಇರುವ ವಿಷಯ ತಿಳಿದಿದ್ದ ಸುಕೇಶ್ ಚಂದ್ರಶೇಖರ್, ಉದ್ಯಮಿ ಪತ್ನಿಯ ಬಳಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಸುವುದಾಗಿ ಹೇಳಿ 200 ಕೋಟಿ ಪಡೆದುಕೊಂಡು ವಂಚಿಸಿದ್ದ. ಇದರಲ್ಲಿ 10 ಕೋಟಿಯನ್ನು ಜಾಕ್ವೆಲಿನ್ ಫರ್ನಾಂಡಿಸ್ ಗೆ ಉಡುಗೊರೆ ನೀಡಿದ್ದನು ಎಂದು ತಿಳಿದು ಬಂದಿದೆ.