ನವದೆಹಲಿ: ಗೃಹ ಸಚಿವರೂ ರಾಜ್ಯ ಅಡಕೆ ಕಾರ್ಯಪಡೆ ಅಧ್ಯಕ್ಷರೂ ಆದ ಆರಗ ಜ್ಞಾನೇಂದ್ರ ಅವರ ನೇತೃತ್ವದ ನಿಯೋಗ, ಇಂದು ಕೇಂದ್ರ ಪಾರ್ಲಿಮೆಂಟರಿ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ರಾಜ್ಯ ಅಡಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿತು.
ದೇಶಕ್ಕೆ ಆಮದು ಆಗುತ್ತಿರುವ ಅಡಕೆ ಉತ್ಪನ್ನಗಳ ಮೇಲೆ ಹೆಚ್ಚಿನ ನಿಯಂತ್ರಣ ವಿಧಿಸಬೇಕು ಎಂದು ನಿಯೋಗ ಕೇಂದ್ರ ಸಚಿವರಲ್ಲಿ ಮನವಿ ಮಾಡಿತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್ ಹಾಗೂ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರೂ ಉಪಸ್ಥಿತರಿದ್ದರು.