ಬೆಂಗಳೂರು: ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಮೊಟ್ಟೆ ಎಸೆದಿರುವುದರ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕೈವಾಡ ಇರಬಹುದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಂಕೆ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ಧರ್ಮದ ಮೇಲೆ, ಸಾವರ್ಕರ್ ಗೆ ಅವಮಾನ ಮಾಡಿದ್ದಾರೆ. ಇದನ್ನು ಕಾಂಗ್ರೆಸ್ ನಲ್ಲಿ ಇರೋರೇ ಸಹಿಸಲ್ಲ. ಹೀಗಾಗಿ ನಿನ್ನೆ ಕಾಂಗ್ರೆಸ್ ಕಾರ್ಯಕರ್ತ ಸಂಪತ್ ಸಿದ್ದರಾಮಯ್ಯರತ್ತ ಮೊಟ್ಟೆ ಎಸೆದಿದ್ದಾರೆ. ಸಿದ್ದರಾಮಯ್ಯಗೆ ಡಿಕೆಶಿಯವರೇ ಮೊಟ್ಟೆ ಹೊಡೆಸಿರಬೇಕು ಎಂದು ತಿಳಿಸಿದರು.